ಅಜ್ಜಾವರ: ಅಜ್ಜಾವರ ಗ್ರಾಮ ಪಂಚಾಯತ್ನ ಮಾಜಿ ಸದಸ್ಯರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕರು ಹಾಗೂ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಶ್ರೀ ಸೋಮನಾಥ ಮುಳ್ಯಕಜೆ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಸೌಮ್ಯ ಸ್ವಭಾವ, ಸರಳತೆ, ಪ್ರಾಮಾಣಿಕತೆ ಹಾಗೂ ಜನಪರ ಕಾಳಜಿಯಿಂದ ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದ ಸೋಮನಾಥ ಮುಳ್ಯಕಜೆ ಅವರು, ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಗ್ರಾಮೀಣ ಜನರೊಂದಿಗೆ ಆತ್ಮೀಯವಾಗಿ ಬೆರೆತು, ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದ ಅವರು, ತಮ್ಮ ಸರಳ ನಡೆ-ನುಡಿ ಹಾಗೂ ಸ್ನೇಹಪರ ವ್ಯಕ್ತಿತ್ವದಿಂದ ಎಲ್ಲರಿಗೂ ಆತ್ಮೀಯರಾಗಿದ್ದರು.





m
