ಕೊಯನಾಡು: ಯೂತ್ ಫ್ರೆಂಡ್ಸ್ ಕೊಯನಾಡು ವತಿಯಿಂದ ಸುನ್ನಿ ಮುಸ್ಲಿಂ ಜುಮ್ಮಾ ಮಸೀದಿ ಕೊಯನಾಡು, ನುಸ್ರತುಲ್ ಇಸ್ಲಾಂ ಅಸೋಸಿಯೇಷನ್ ಕೊಯನಾಡು ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಸಹಭಾಗಿತ್ವದಲ್ಲಿ ಪ್ರವಾದಿ ಮುಹಮ್ಮದ್ ﷺ ಅವರ 1501ನೇ ಜನ್ಮದಿನಾಚರಣೆಯ ಪ್ರಯುಕ್ತ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಇದರೊಂದಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಹಿಜಾಮಾ ಕ್ಯಾಂಪ್ ಕೂಡ ನಡೆಯಲಿದೆ. ಅಗಸ್ಟ್ 24ರಂದು ( ನಾಳೆ) ಸೋಮವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೊಯನಾಡಿನ ಸುಬುಲುಸ್ಸಲಾಂ ಮದ್ರಸ ವಠಾರದಲ್ಲಿ ಶಿಬಿರ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ರಕ್ತದಾನ ಮಾಡಲು ಆಸಕ್ತಿ ಹೊಂದಿರುವವರು 74836 39871 ಅಥವಾ 94493 03337 ಸಂಖ್ಯೆಗೆ ಸಂಪರ್ಕಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





m
