ಇತರೆ

ಬೆಳ್ಳಾರೆಯಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಉದ್ಘಾಟನೆ

ಯುವಜನರ ದೈಹಿಕ–ಮಾನಸಿಕ ಸದೃಢತೆಗೆ ಕ್ರೀಡಾ ಸ್ಪರ್ಧೆಗಳು ಅಗತ್ಯ: ಶಾಸಕಿ ಭಾಗೀರಥಿ ಮುರುಳ್ಯ

ಬೆಳ್ಳಾರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ ಇವರ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ, “ಕರಾಟೆ ಕೇವಲ ಒಂದು ಕ್ರೀಡೆಯಲ್ಲ; ಅದು ಶಿಸ್ತು, ಕಠಿಣ ಪರಿಶ್ರಮ ಹಾಗೂ ಮುಖ್ಯವಾಗಿ ಆತ್ಮರಕ್ಷಣೆಯ ಕಲೆ. ಸ್ಪರ್ಧೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಕ್ರೀಡಾಪಟುವಿನಲ್ಲೂ ಗೆಲ್ಲುವ ಛಲ ಹಾಗೂ ಉತ್ತಮ ಕೌಶಲ್ಯ ಎದ್ದು ಕಾಣುತ್ತಿದೆ” ಎಂದು ಹೇಳಿದರು.

ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವುದರೊಂದಿಗೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಗ್ರಾಮೀಣ ಮತ್ತು ನಗರ ಮಟ್ಟದಲ್ಲಿ ಇಂತಹ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ತಿಳಿಸಿದರು ನಮ್ಮ ಕ್ಷೇತ್ರದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಅಗತ್ಯವಿರುವ ಬೆಂಬಲ ಮತ್ತು ಪ್ರೋತ್ಸಾಹ ನೀಡಲು ನಾವು ಸದಾ ಬದ್ಧರಾಗಿದ್ದೇವೆ. ಈ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಎಲ್ಲಾ ಸ್ಪರ್ಧಾಳುಗಳಿಗೆ ಹೃದಯಪೂರ್ವಕ ಶುಭಾಶಯಗಳು. ನಿಮ್ಮ ಪರಿಶ್ರಮಕ್ಕೆ ತಕ್ಕ ಯಶಸ್ಸು ದೊರೆಯಲಿ. ಸೋಲು–ಗೆಲುವಿಗಿಂತ ಕ್ರೀಡಾಸ್ಪೂರ್ತಿ ಮುಖ್ಯವಾಗಿರಲಿ” ಎಂದು ಶಾಸಕಿ ಹಾರೈಸಿದರು.
ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕರಾಟೆ ಕೌಶಲ್ಯವನ್ನು ಪ್ರದರ್ಶಿಸಿದರು.