ಸುಳ್ಯ: ಪರಿವಾರಕಾನ ಬಳಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ ?
ಸುಳ್ಯ: ಪರಿವಾರಕಾನ ಉಬರಡ್ಕ ಕ್ರಾಸ್ ಬಸ್ ಡಿಪೊ ಸಮೀಪದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ಸುಳ್ಯ ನಗರದಲ್ಲಿ ಟೈಲರ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಗಂಗಾಧರ ಟೈಲರ್ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಮಾಹಿತಿ ತಿಳಿದುಬಂದ ತಕ್ಷಣ ಸಂಬಂಧಿಕರು ಹಾಗೂ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Scroll To Top