ಸುಳ್ಯ: ಸುಳ್ಯ ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ SIR (Special Intensive Revision) ನೋಟಿಸ್ ಪ್ರಕ್ರಿಯೆ ಮುಂದುವರಿದಿದ್ದು, ನೋಟಿಸ್ ಪಡೆದಿರುವ ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಅಧಿಕಾರಿಗಳ ಮುಂದೆ ಹಾಜರಾಗಿ ದಾಖಲೆಗಳ ಪರಿಶೀಲನೆಗೆ ಸಹಕರಿಸುತ್ತಿದ್ದಾರೆ.ನೋಟಿಸ್‌ನಲ್ಲಿ ಸೂಚಿಸಿರುವ ವಿವರಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಹಾಜರುಪಡಿಸಿ ತಮ್ಮ ದಾಖಲೆಗಳನ್ನು ಪರಿಶೀಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಅಧಿಕಾರಿಗಳು ಸಲ್ಲಿಸಲಾಗುತ್ತಿರುವ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ಮಾಹಿತಿಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ.
ನೋಟಿಸ್ ಪಡೆದಿರುವ ಮತದಾರರು ನಿಗದಿತ ದಿನಾಂಕ ಹಾಗೂ ಸ್ಥಳದಲ್ಲಿ ಹಾಜರಾಗಿ, ನೋಟಿಸ್‌ನಲ್ಲಿ ಸೂಚಿಸಿರುವ ಅಗತ್ಯ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಲಾಗಿದೆ. ಅನಿವಾಸಿ ಭಾರತೀಯ ಮತದಾರರಿಗೆ ವಿನಾಯಿತಿ ನೀಡಲಾಗಿದ್ದು, ಅವರ ಪರವಾಗಿ ಹತ್ತಿರದ ಸಂಬಂಧಿಕರು ಅಗತ್ಯ ದಾಖಲೆಗಳನ್ನು ಕೊಂಡೊಯ್ದು ಸಲ್ಲಿಸುವಂತೆ ಸೂಚಿಸಲಾಗಿದೆ.SIR ಪ್ರಕ್ರಿಯೆಯ ಭಾಗವಾಗಿ ನಡೆಯುತ್ತಿರುವ ಈ ಪರಿಶೀಲನೆಗೆ ಸಾರ್ವಜನಿಕರಿಂದಲೂ ಸಹಕಾರ ವ್ಯಕ್ತವಾಗುತ್ತಿದೆ.

