ಕೊಡಗು ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಕುಮಾರ್ ಕನ್ಯಾನ ವಹಿಸಿದ್ದರು. ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಸಂತೋಷ್ ಕುಮಾರ್ ಹೆಚ್.ಬಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯರಾದ ಸುರೇಶ್ ಪಿ.ಎಲ್., ಮಾಜಿ ಕೊಡಗು ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್. ಮೊಯ್ದೀನ್ ಕುನ್ಹಿ, ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ರಿತಿನ್ ಡೆಮ್ಮಲೆ, ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರಾದ ಹನೀಫ್ ಸಂಪಾಜೆ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ, ಝಫರ್ ಕೊಯನಾಡು, ತಿಲಕ ಚೆಡಾವು, ಮೋಹನ ಬಾಳೆಕಜೆ, ಜಗನ್ ಡೆಮ್ಮಲೆ, ಅಬ್ದುಲ್ ರಿಯಾಜ್ ಕೊಯನಾಡು ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ದೇಶಸೇವೆ, ಸರಳತೆ, ಪ್ರಾಮಾಣಿಕತೆ ಮತ್ತು ಆದರ್ಶಗಳನ್ನು ಸ್ಮರಿಸಲಾಯಿತು. ಅವರ ಜೀವನಮೌಲ್ಯಗಳು ಹಾಗೂ ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ನೆನಪಿಸಿಕೊಳ್ಳಲಾಯಿತು.