Featured, ಸ್ಥಳೀಯ

ಪುತ್ತೂರು: ಕೌಡಿಚಾರ್ ಗಾಳಿ-ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಬೃಹತ್ ಮರ; ರಸ್ತೆ ಸಂಚಾರ ಸ್ಥಗಿತ

ಪುತ್ತೂರು: ಗಾಳಿ-ಮಳೆಯ ಪರಿಣಾಮ ಕೌಡಿಚಾರ್ ಸಮೀಪದ ರಸ್ತೆಗೆ ಅಡ್ಡಲಾಗಿ ಹಾದುಹೋಗಿರುವ ವಿದ್ಯುತ್ ತಂತಿಯ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದ್ದು, ಅದರೊಂದಿಗೆ ವಿದ್ಯುತ್ ಕಂಬವೂ ನೆಲಕ್ಕುರುಳಿದ ಘಟನೆ ನಡೆದಿದೆ.

ಘಟನೆಯ ಪರಿಣಾಮ ಸುಳ್ಯ–ಪುತ್ತೂರು ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ವಿಷಯ ತಿಳಿದ ತಕ್ಷಣ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ರಸ್ತೆಗೆ ಬಿದ್ದಿರುವ ಮರ ಹಾಗೂ ವಿದ್ಯುತ್ ಕಂಬವನ್ನು ತೆರವುಗೊಳಿಸಿ ವಾಹನ ಸಂಚಾರ ಪುನಾರಂಭಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Related Posts