ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಮಡಿಕೇರಿ: ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅವರು ಗುರುವಾರ (ಅ.29) ಅಧಿಕಾರ ಸ್ವೀಕರಿಸಿದ್ದಾರೆ.
ಕರ್ನಾಟಕ ನಾಗರಿಕ ಸೇವೆಯ (ಕೆಎಎಸ್) 2014ನೇ ಬ್ಯಾಚ್ನ ಅಧಿಕಾರಿಯಾಗಿರುವ ಜಯಲಕ್ಷ್ಮಿ ರಾಯಕೋಡ ಅವರು ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ಉಪ ಕಾರ್ಯದರ್ಶಿಯಾಗಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಅಲ್ಲದೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಇದೀಗ ಕೊಡಗು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ