Featured, ಇತರೆ

ಕುಂತೂರಿನಲ್ಲಿ ಜಿಂದಗಿ ಕ್ಲಬ್ ಹಾಗೂ ಕೆಆರ್‌ಎಸ್ ಪಕ್ಷದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಕಡಬ, ನ. 1: ಕಡಬ ಸಮೀಪದ ಕುಂತೂರಿನಲ್ಲಿ ಜಿಂದಗಿ ಕ್ಲಬ್ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಜಂಟಿ ಆಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಕೆಆರ್‌ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ನೌಶಾದ್ ಅಬ್ಬಾಸ್ ಅವರ ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕನ್ನಡಾಂಬೆಗೆ ಪುಷ್ಪಗುಚ್ಛ ಸಮರ್ಪಿಸುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ್, ಸುಳ್ಯ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಸೇರಿದಂತೆ ಪಕ್ಷದ ವಿವಿಧ ಜಿಲ್ಲಾ ಪದಾಧಿಕಾರಿಗಳು, ಸದಸ್ಯರು ಹಾಗೂ ಜಿಂದಗಿ ಕ್ಲಬ್‌ನ ಸದಸ್ಯರು ಭಾಗವಹಿಸಿದ್ದರು.

ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

Related Posts