ಪುತ್ತೂರು: SKJM ಕೂರ್ನಡ್ಕ ರೇಂಜ್ ಆಶ್ರಯದಲ್ಲಿ ಸವಣೂರಿನಲ್ಲಿ ನಡೆದ ಮದ್ರಸ ವಿದ್ಯಾರ್ಥಿಗಳ ಕಲಾ ಸಾಹಿತ್ಯ ‘ಮುಸಾಬಕ’ ಸ್ಪರ್ಧೆಯಲ್ಲಿ ಕೊರಿಂಗಿಲ ಮಿಸ್ಬಾಹುಲ್ ಹುದಾ ಮದ್ರಸದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಹಲವು ಪ್ರಶಸ್ತಿ ಯನ್ನು ಪಡೆದುಕೊಂಡು ಮದ್ರಸಕ್ಕೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಮದ್ರಸದ ಆಡಳಿತ ಮಂಡಳಿ, ಅಧ್ಯಾಪಕರು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.