ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿ, ಇಕ್ಬಾಲ್ ಬಾಳಿಲ ಅವರು ರಾಜ್ಯಾದ್ಯಂತ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನ, ತರಬೇತಿ ಶಿಬಿರ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಯುವಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಿದ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್ಕೆಎಸ್ಎಸ್ಎಫ್ ರಾಜ್ಯಾಧ್ಯಕ್ಷ ರಫೀಕ್ ಹುದವಿ ಕೊಳಾರಿ, ಸಯ್ಯಿದ್ ಅಮೀರ್ ತಂಙಳ್ ಕಿನ್ಯ, ರಾಜ್ಯ ಕೋಶಾಧಿಕಾರಿ ತಮ್ಲೀಕ್ ದಾರಿಮಿ ಕೊಡಗು, ಕಾರ್ಯಾಧ್ಯಕ್ಷೀಯ ಕಾರ್ಯದರ್ಶಿ ತಾಜುದ್ದೀನ್ ರಹ್ಮಾನಿ, ಕೇಂದ್ರ ಸಮಿತಿ ಕಾರ್ಯದರ್ಶಿ ಕಾಸಿಂ ದಾರಿಮಿ ಸೇರಿದಂತೆ ರಾಜ್ಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.