ಈ ಹಿನ್ನೆಲೆಯಲ್ಲಿ ಬಿ.ಎಸ್ಸಿ. ನರ್ಸಿಂಗ್ ಕೋರ್ಸ್ಗೆ ಪ್ರವೇಶ ಪಡೆಯಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ನವೆಂಬರ್ 14ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯೊಳಗೆ ಮಡಿಕೇರಿಯ ಸರ್ಕಾರಿ ಶುಶ್ರೂಷಾ ಕಾಲೇಜಿಗೆ ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನಿಯಮಾನುಸಾರ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದ್ದು, ನೋಂದಾಯಿತ ಅಭ್ಯರ್ಥಿಗಳಿಗೆ ಸರ್ಕಾರದ ಮಾರ್ಗಸೂಚಿಗಳನ್ವಯ ಮೆರಿಟ್ ಆಧಾರದಲ್ಲಿ ಸೀಟು ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಶುಶ್ರೂಷಾ ಕಾಲೇಜಿನ ಪ್ರಾಂಶುಪಾಲರಾದ ಮಂಜುಳಾ ಎ.ಕೆ. (ಮೊಬೈಲ್: 8088835156) ಅಥವಾ ಸಮನ್ವಯ ಅಧಿಕಾರಿ ಗುರುಪಾದ ಕೆ.ಪಿ. (ಮೊಬೈಲ್: 9964244304) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.