Featured, ಇತರೆ

ನೆಹರು ಮೆಮೋರಿಯಲ್ ಕಾಲೇಜಿನ ಸುವರ್ಣ ಮಹೋತ್ಸವ: ನ. 23 ಮತ್ತು 24ರಂದು ಅಂತರ ಶಾಲಾ ಹಾಗೂ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ

ಸುಳ್ಯ, ಪುತ್ತೂರು, ಕಡಬ ಹಾಗೂ ಕೊಡಗು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಆಹ್ವಾನ | ನ.18ರೊಳಗೆ ತಂಡಗಳ ನೋಂದಣಿಗೆ ಅವಕಾಶ 

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇದರ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ನವೆಂಬರ್ 23 ಮತ್ತು 24ರಂದು ಅಂತರ ಶಾಲಾ ಹಾಗೂ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಬಾಲಕರು ಮತ್ತು ಬಾಲಕಿಯರಿಗಾಗಿ ಕಬಡ್ಡಿ, ವಾಲಿಬಾಲ್, ಚೆಸ್, ಕ್ಯಾರಂ ಹಾಗೂ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಬಾಲಕರಿಗೆ ಫುಟ್ಬಾಲ್ ಮತ್ತು ಬಾಲಕಿಯರಿಗೆ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಮೇಲ್ಕಂಡ ಎಲ್ಲಾ ಕ್ರೀಡಾ ಸ್ಪರ್ಧೆಗಳನ್ನು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೂ ಪ್ರತ್ಯೇಕವಾಗಿ ಆಯೋಜಿಸಲಾಗಿದೆ.

ಸುಳ್ಯ, ಪುತ್ತೂರು, ಕಡಬ ಹಾಗೂ ಕೊಡಗು ತಾಲೂಕುಗಳ ಎಲ್ಲಾ ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳು ತಮ್ಮ ತಂಡಗಳೊಂದಿಗೆ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಕಾಲೇಜಿನ ಪ್ರಾಂಶುಪಾಲರು ಆಹ್ವಾನಿಸಿದ್ದಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸಲು ಆಸಕ್ತ ಶಾಲಾ ಮತ್ತು ಪದವಿಪೂರ್ವ ಕಾಲೇಜುಗಳು ನವೆಂಬರ್ 18ರೊಳಗೆ ತಮ್ಮ ತಂಡಗಳನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ 9480207621 ಅಥವಾ 9916424844 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.