ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಾಳುಗೋಡು ಗ್ರಾಮದ ಪದಕದಲ್ಲಿ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.
ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುಳ್ಯ ಕ್ಷೇತ್ರದ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ಕೈಗೊಳ್ಳಬೇಕಾದ ಸೇತುವೆಗಳ ಪುನರ್ ನಿರ್ಮಾಣಕ್ಕಾಗಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಯೋಜನೆಯಡಿ (ಲೆಕ್ಕ ಶೀರ್ಷಿಕೆ: 5054-80-190-0-01-132) ಅನುದಾನ ಒದಗಿಸುವಂತೆ ಶಾಸಕರು 2026ರ ಮಾರ್ಚ್ 21ರಂದು ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಸಿದ್ದರು.
ಸುಳ್ಯ ಕ್ಷೇತ್ರದ ಐದು ಸೇತುವೆಗಳ ನಿರ್ಮಾಣಕ್ಕಾಗಿ ಒಟ್ಟು 5 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಸಚಿವರು, ಮೇ 20ರಂದು 5 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದರು.
ಈ ಅನುದಾನದಡಿ ಸುಳ್ಯ ತಾಲೂಕಿನ ನಡುಗಲ್ಲು–ಹರಿಹರ–ಪಲ್ಲತ್ತಡ್ಕ–ಬಾಳುಗೋಡು ಜಿಲ್ಲಾ ಮುಖ್ಯ ರಸ್ತೆಯ 10.75 ಕಿ.ಮೀ. ವ್ಯಾಪ್ತಿಯ ಪದಕ ಎಂಬಲ್ಲಿ 175 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣವಾಗಲಿದೆ.

ಈ ಸಂದರ್ಭದಲ್ಲಿ ಪದಕ ಸೇತುವೆಯ ಫಲಾನುಭವಿಗಳು ಹಳೆಯ ಸೇತುವೆಗೆ ಹಾಲು ಎರೆಯುವ ಮೂಲಕ ಭಾವನಾತ್ಮಕವಾಗಿ ಕಾಮಗಾರಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರಾದ ಎ.ವಿ. ತೀರ್ಥರಾಮ, ಕೃಷ್ಣಯ್ಯ ಮೂಲೆತೋಟ, ವಿನಯ್ ಮುಳುಗಾಡು, ಚಂದ್ರಹಾಸ ಶಿವಾಲ, ಹಿಮ್ಮತ್ ಸೇರಿದಂತೆ ಹಲವು ಕಾರ್ಯಕರ್ತರು ಹಾಗೂ ಸ್ಥಳೀಯ ಮಾತೆಯರು ಉಪಸ್ಥಿತರಿದ್ದರು.