Featured, ಇತರೆ

ಸುಳ್ಯ ಕ್ಷೇತ್ರದ ರೈಲ್ವೆ ಅಭಿವೃದ್ಧಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ಗೆ ಶಾಸಕರ ಮನವಿ

ಸವಣೂರು, ಎಡಮಂಗಲದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ, ಕಾಣಿಯೂರು ನಿಲ್ದಾಣವನ್ನು ಎಲಡ್ಕಕ್ಕೆ ಸ್ಥಳಾಂತರಿಸಿ ಟರ್ಮಿನಲ್ ನಿರ್ಮಿಸಲು ಆಗ್ರಹ

ಮಂಗಳೂರು: ಮಂಗಳೂರಿಗೆ ನಿನ್ನೆ ಭೇಟಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸುಳ್ಯ ವಿಧಾನಸಭಾ ಕ್ಷೇತ್ರದ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಮನವಿಯನ್ನು ಶಾಸಕ ಭಗೀರಥಿ ಮುರುಳ್ಯ ಅವರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮೂಲಕ ಸಲ್ಲಿಸಿದರು.

ಸುಳ್ಯ ಕ್ಷೇತ್ರದ ಸವಣೂರು ಮತ್ತು ಎಡಮಂಗಲದಲ್ಲಿ ರೈಲ್ವೆ ಗೇಟ್‌ಗಳಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಎರಡೂ ಕಡೆಗಳಲ್ಲಿ ರೈಲ್ವೆ ಮೇಲ್ಸೇತುವೆ (ಓವರ್‌ಬ್ರಿಡ್ಜ್) ನಿರ್ಮಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಲ್ಲದೆ, ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು. ಕಾಣಿಯೂರು ರೈಲ್ವೆ ನಿಲ್ದಾಣವನ್ನು ಸಮೀಪದ ಎಲಡ್ಕ ಪ್ರದೇಶಕ್ಕೆ ಸ್ಥಳಾಂತರಿಸಿ, ಅಲ್ಲಿ ಟರ್ಮಿನಲ್ ನಿಲ್ದಾಣ ನಿರ್ಮಿಸಬೇಕೆಂದು ಶಾಸಕರು ಮನವಿ ಸಲ್ಲಿಸಿದ್ದಾರೆ.

ಈ ಹಿಂದೆ ಕೂಡ ಶಾಸಕರು ಇದೇ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಇದೀಗ ಕೇಂದ್ರ ರೈಲ್ವೆ ಸಚಿವರ ಗಮನಕ್ಕೆ ಮತ್ತೊಮ್ಮೆ ಬೇಡಿಕೆಗಳನ್ನು ತಂದು, ಕ್ಷೇತ್ರದ ರೈಲ್ವೆ ಸಂಪರ್ಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Related Posts