Featured, ಇತರೆ

ಮಂಗಳೂರು : ಜಮೀಯ್ಯತುಲ್ ಫಲಾಹ್ ವತಿಯಿಂದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಜಮೀಯ್ಯತುಲ್ ಫಲಾಹ್ ವತಿಯಿಂದ 2026 ನೇ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಾಗೂ ಭಾರತ ಪಂಚರತ್ನ ಪ್ರಶಸ್ತಿ ಪುರಸ್ಕೃತರಾದ ಜಮೀಯ್ಯತುಲ್ ಫಲಾಹ್ ಸಂಸ್ಥೆಯ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಕಂಕನಾಡಿ ಜಮೀಯ್ಯತುಲ್ ಫಲಾಹ್ ಸಭಾಭವನದಲ್ಲಿ ನಡೆಯಿತು.

ಸಂಸ್ಥೆಯ ಉಭಯ ಜಿಲ್ಲಾಧ್ಯಕ್ಷ ಅಶ್ಫಾಕ್ ಅಹ್ಮದ್ ಕಾರ್ಕಳ ಅವರ ಅಧ್ಯಕ್ಷತೆಯಲ್ಲಿ ನಡೆದ ನಡೆದ ಈ ಕಾರ್ಯಕ್ರಮದಲ್ಲಿ 2026 ನೇ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಂಸ್ಥೆಯ ಸದಸ್ಯರಾದ ಕೆ.ಎಂ.ಕೆ.ಮಂಜನಾಡಿ, ನೋಟರಿ ಅಬ್ದುಲ್ ಅಝೀಝ್, ಡಾ. ಎಸ್. ಅಬೂಬಕ್ಕರ್ ಆರ್ಲಪದವು ಹಾಗೂ ಭಾರತ ಪಂಚರತ್ನ ಪ್ರಶಸ್ತಿಗೆ ಭಾಜನರಾದ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಬೆಳ್ತಂಗಡಿ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಉಪಾಧ್ಯಕ್ಷ ಎಲ್.ಟಿ. ಅಬ್ದುಲ್ ರಝಾಕ್ ಹಾಜಿ ಪುತ್ತೂರು ಸ್ವಾಗತಿಸಿ, ಕೋಶಾಧಿಕಾರಿ ಅಬ್ದುಲ್ ನಾಸಿರ್ ಕೆ.ಕೆ. ವಂದಿಸಿದರು. ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಕಾರ್ಯಕ್ರಮ ನಿರೂಪಿಸಿದರು.

Related Posts