Featured, ಇತರೆ

ಹಾರಂಗಿ ಹಿನ್ನೀರಿನಲ್ಲಿ ಜಲ ಸಾಹಸ ಚಟುವಟಿಕೆ ಸ್ಥಗಿತ: ಸ್ಪೀಡ್‌ಬೋಟ್ ದುರಂತದ ಬಳಿಕ ಜಿಲ್ಲಾಡಳಿತ ಕ್ರಮ

ಹಾರಂಗಿ ಹಿನ್ನೀರು ಪ್ರಮುಖ ಪ್ರವಾಸಿ ತಾಣವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸ್ಥಳೀಯರ ಪ್ರಕಾರ, ಖಾಸಗಿ ಕಂಪನಿಯೊಂದು 2023ರಿಂದ ಇಲ್ಲಿ ಜಲ ಸಾಹಸ ಚಟುವಟಿಕೆಗಳನ್ನು ನಡೆಸುತ್ತಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಾರಂಗಿ ಅಣೆಕಟ್ಟಿನ ಬಳಿಯ ಆನೆ ಶಿಬಿರದ ಸಮೀಪ ಈ ಅಪಘಾತ ಸಂಭವಿಸಿತ್ತು. ದುರಂತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

ಇದೇ ವೇಳೆ ಜಿಲ್ಲಾಧಿಕಾರಿಗಳು ದುಬಾರೆ ರಿವರ್ ರಾಫ್ಟಿಂಗ್ ಸ್ಥಳದ ಸಮೀಪ ನಿರ್ಮಿಸಲಾಗಿರುವ ಹೈಟೆಕ್ ಶೌಚಾಲಯ ಸೌಲಭ್ಯದ ಬಗ್ಗೆಯೂ ಮಾಹಿತಿ ಪಡೆದರು. ಬಳಿಕ ಬಸವನಹಳ್ಳಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಸತೀಶ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿ, ತಹಶೀಲ್ದಾರ್ ರಮೇಶ್ ಹಾಗೂ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಭು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts