Featured, ಇತರೆ

ಕ್ರಿಕೆಟಿಗ ಯುಜುವೇಂದ್ರ ಚಾಹಲ್ ಬಿಜೆಪಿಗೆ ಸೇರ್ಪಡೆ

ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ನೇಮಕ

ನವದೆಹಲಿ: ಖ್ಯಾತ ಕ್ರಿಕೆಟಿಗ ಯುಜುವೇಂದ್ರ ಚಾಹಲ್ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡಿದ್ದಾರೆ. ಪಕ್ಷಕ್ಕೆ ಸೇರ್ಪಡೆಗೊಂಡ ಬೆನ್ನಲ್ಲೇ ಅವರನ್ನು ಬಿಜೆಪಿಯ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ.

ಈ ಹಿಂದೆ ಚಾಹಲ್ ಅವರು ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಅಮರಪಾಲ್ ಮೌರ್ಯ ಅವರನ್ನು ಭೇಟಿಯಾಗಿದ್ದರು. ಇದೀಗ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಅವರು, ಪಕ್ಷದಲ್ಲಿ ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಬಿಜೆಪಿ ಕುಟುಂಬದಲ್ಲಿ ಸ್ಥಾನ ಮತ್ತು ಗೌರವ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಅಮರಪಾಲ್ ಮೌರ್ಯ ಅವರಿಗೆ ಚಾಹಲ್ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಕ್ರಿಕೆಟ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಚಾಹಲ್ ಅವರ ರಾಜಕೀಯ ಪ್ರವೇಶ ಇದೀಗ ಗಮನ ಸೆಳೆದಿದೆ.

Related Posts