Featured, ಇತರೆ

ಅನ್ವಾರುಲ್ ಹುದಾ ಸ್ವರ್ಣ ಮಹೋತ್ಸವ ಸಮಿತಿಯಿಂದ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರಿಗೆ ಸನ್ಮಾನ

ಮಂಗಳೂರು: ಅನ್ವಾರುಲ್ ಹುದಾ ಸಂಸ್ಥೆಯ ಸ್ವರ್ಣ ಮಹೋತ್ಸವ ಸಮಿತಿಯ ವತಿಯಿಂದ ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಗಳಾಗಿ ಆಯ್ಕೆಯಾದ ಸಲೀಂ ಅಹ್ಮದ್ ಅವರನ್ನು ನವೆಂಬರ್ 23ರಂದು ಮಂಗಳೂರಿನಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳ ಕುರಿತು ಸಭಾಪತಿಗಳಿಗೆ ಮಾಹಿತಿ ನೀಡಿದ ಸ್ವರ್ಣ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ನೂತನ ಜವಾಬ್ದಾರಿ ವಹಿಸಿಕೊಂಡಿರುವ ಸಲೀಂ ಅಹ್ಮದ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಮುಂದಿನ ಸಾರ್ವಜನಿಕ ಸೇವಾ ಕಾರ್ಯಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಮಂಡಳಿಯ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್, ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷ ಅಶ್ರಫ್ ಗುಂಡಿ, ಅನ್ವಾರುಲ್ ಹುದಾ ಸ್ವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಅಮೀರ್ ಕುಕ್ಕುಂಬಳ, ಜುಬೇರ್ ಅರಂತೋಡು, ಲತೀಫ್ ಮೊಟ್ಟಂಗಾರ್, ತಾಜುದ್ದೀನ್ ಅರಂತೋಡು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Related Posts